ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಾರ್ವಜನಿ ಕ ಮಾಹಿತಿ ಅಧಿಕಾರಿ ವಿರುದ್ಧ ಆಯೋಗಕ್ಕೆ ಅಪೀಲ್

Posted: ಫೆಬ್ರವರಿ 6, 2014 in Uncategorized

ಉಡುಪಿ: ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಸಾರ್ವಜನಿಕ ಮಾಹಿತಿ
ಅಧಿಕಾರಿಯಾಗಿರುವ ಸಹಾಯಕ ಆಡಳಿತಾಧಿಕಾರಿ ಕೆ.ಸಂಜೀವ ಗೌಡ ಹಾಗೂ ಮೇಲ್ಮನವಿ ಪ್ರಾಧಿಕಾರಿಯಾದ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಾಹಿತಿ ಹಕ್ಕು ಕಾಯಿದೆ-2005ನ್ನು ಉಲ್ಲಂಘಿಸಿದ ಪ್ರಕರಣ ನಡೆದಿದೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮಸ್ಥಳ ಮತ್ತು ಉಜಿರೆ ಗ್ರಾಮಗಳಲ್ಲಿ 1986ರ ಜನವರಿ ಒಂದರಿಂದ 2013ರ ಅಕ್ಟೋಬರ್ 17ರ ವರೆಗೆ ನಡೆದ ಕೊಲೆ, ದರೋಡೆ, ಅಸ್ವಾಭಾವಿಕ ಮರಣ, ವ್ಯಕ್ತಿ ಕಾಣೆ ಮೊದಲದ ಎಲ್ಲಾ ರೀತಿಯ ಪ್ರಕರಣಗಳ ಬಗ್ಗೆ ತನಿಖಾ ಪ್ರಗತಿ ಸಹಿತ ಸಮಗ್ರ ಮಾಹಿತಿ ಕೋರಿ ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷರಾದ ಶ್ರೀರಾಮ ದಿವಾಣ ಅವರು ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಮಾಹಿತಿ ಹಕ್ಕು ಅರ್ಜಿ ಸಲ್ಲಿಸಿದ್ದರು.

2013ರ ಅಕ್ಟೋಬರ್ 18ರಂದು ಮಾಹಿತಿ ಹಕ್ಕು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಲ್ಲಿಸಿ 30 ದಿನ ಕಳೆದರೂ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಮಾಹಿತಿ ನೀಡದ ಕಾರಣ, ಅರ್ಜಿದಾರರು ಕಾಯಿದೆ ಪ್ರಕಾರ ಡಿ.6ರಂದು ಜಿಲ್ಲಾ ಪೋಲಸ್ ಅಧೀಕ್ಷಕರಿಗೆ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ಸಲ್ಲಿಸಿ 30 ದಿನ ಕಳೆದರೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಾಹಿತಿ ಕೊಡದ ಕಾರಣ ಇದೀಗ ಇವರ ವಿರುದ್ಧ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗಕ್ಕೆ ಅಪೀಲು ಸಲ್ಲಿಸಿದ್ದಾರೆ.

ಸಾರ್ವಜನಿಕ ಮಾಹಿತಿ ಅಧಿಕಾರಿಯಾದ ಸಂಜೀವ ಗೌಡ ಹಾಗೂ ಮೇಲ್ಮನವಿ ಪ್ರಾಧಿಕಾರಿಯಾದ ಜಿಲ್ಲಾ ಪೊಲೀಸ್ ಅಧೀಕ್ಷಕರು ದುರುದ್ಧೇಶಪೂರ್ವಕವಾಗಿಯೇ ಮಾಹಿತಿ ನೀಡದೆ ಕಾಯಿದೆಯನ್ನು ಉಲ್ಲಂಘಿಸಿದ್ದಾರೆ ಎಂದು ಅಪೀಲುದಾರರು ಆಯೋಗಕ್ಕೆ ಸಲ್ಲಿಸಿದ ಅಪೀಲಿನಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s