ಹಿಂದಿ ಕಡ್ಡಾಯ ಬೇಡ: ಮುಖ್ಯಮಂತ್ರಿ ಚಂದ್ರು

Posted: ಜೂನ್ 22, 2014 in Uncategorized

ಬೆಂಗಳೂರು, ಜೂ.21: ಆಡಳಿತದಲ್ಲಿ ಹಿಂದಿ ಭಾಷೆ ಕಡ್ಡಾಯ ಮಾಡುವ ಪ್ರಯತ್ನವನ್ನು ಕೇಂದ್ರ ಸರಕಾರ ಈ ಕೂಡಲೇ ಕೈಬಿಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಂದ್ರು ಆಗ್ರಹಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿ ರಾಷ್ಟ್ರ ಭಾಷೆಯೆಂದು ಎಲ್ಲಿಯೂ ನಮೂದಾಗಿಲ್ಲ. ಆದರೂ ಕೇಂದ್ರ ಸರಕಾರ ಭಾಷಾ ಸಾಮರಸ್ಯಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಹಿಂದಿಯನ್ನು ಕಡ್ಡಾಯ ಮಾಡಲು ಹೊರಟಿದೆ ಎಂದು ವಿರೋಧ ವ್ಯಕ್ತಪಡಿಸಿದರು.

ಬೇರೆ ರಾಜ್ಯ ಭಾಷೆಗಳಂತೆ ಹಿಂದಿ ಭಾಷೆಯೂ ಒಂದಾಗಿದೆ. ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಭಾಷೆಯನ್ನು ಹೇರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳು ಒಗ್ಗೂಡಿ ತೀವ್ರತರದ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಬೆಂಗಳೂರಿನ ಮೆಟ್ರೋ ಸಂಸ್ಥೆಯು ರಾಜ್ಯ ಸ್ವಾಮ್ಯದ ಸಂಸ್ಥೆಯಾಗಿದ್ದು, ರೈಲಿನ ಎಲ್ಲ ನಾಮಫಲಕದಲ್ಲಿ ಮತ್ತು ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯ ಹಾಗೂ ನೇಮಕಾತಿಯಲ್ಲಿ ಸಂಪೂರ್ಣವಾಗಿ ಕನ್ನಡಿಗರನ್ನೆ ಆಯ್ಕೆ ಮಾಡುವುದು ಸರಕಾರದ ನಿಯಮವಾಗಿದೆ. ಆದರೆ, ಮೆಟ್ರೋ ಸಂಸ್ಥೆಯು ಇವೆಲ್ಲ ಆದೇಶವನ್ನು ಗಾಳಿಗೆ ತೂರಿದೆ ಎಂದು ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.

ಕನ್ನಡ ಭಾಷೆಯ ಅಭಿವೃದ್ಧಿಗೆ ಸುಮಾರು 33ಕ್ಕೂ ಹೆಚ್ಚು ಶಿಫಾರಸುಗಳನ್ನು ಸರಕಾರಕ್ಕೆ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ, ಸರಕಾರದ ಮುಖ್ಯಕಾರ್ಯದರ್ಶಿಗಳ ನಿರ್ಲಕ್ಷದಿಂದಾಗಿ 33 ಶಿಫಾರಸುಗಳು ಕಾಗದ ಪತ್ರಗಳಲ್ಲಿ ಮಾತ್ರ ಉಳಿದಿವೆ ಎಂದು ಅವರು ಬೇಸರ
ವ್ಯಕ್ತಪಡಿಸಿದರು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s