‘ಹಿಂದಿ’ ಭಾಷೆ ಹೇರಿಕೆ ವಿರುದ್ಧ ಕನ್ನಡಪರ ಸಂಘಟನೆಗಳ ಆಕ್ರೋಶ

Posted: ಜೂನ್ 23, 2014 in Uncategorized

ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಿಕೆ ಸಂಬಂಧ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ನಗರದಲ್ಲಿ ಧರಣಿ ನಡೆಸಿದವು.

ಜೂನ್ 22ರಂದು ಪುರಭವನದ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಹಲವು ಕನ್ನಡಪರ ಸಂಘಟನೆ ಗಳ ಕಾರ್ಯಕರ್ತರು, ಕೇಂದ್ರ ಸರಕಾರದ ಹಿಂದಿ ಭಾಷಾ ಪ್ರೇಮದ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದೆ, ಹಿಂದಿ ಹೇರಿಕೆ ಸುತ್ತೋಲೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಸಿದ್ದಯ್ಯ ಮಾತ ನಾಡಿ, ‘ಬರಲಿವೆ ಒಳ್ಳೆಯ ದಿನಗಳು’ ಎಂಬ ಘೋಷಣೆಯೊಂದಿಗೆ ಕೇಂದ್ರ ದಲ್ಲಿ ಅಧಿಕಾರಕ್ಕೆ ಬಂದ ಮೋದಿ ಸರ ಕಾರ ತನ್ನ ಹಿಂದಿ ಹೇರಿಕೆ ಸಂಬಂಧ ಹೊರಡಿಸಿರುವ ಸುತ್ತೋಲೆ ಹಿಂಪಡೆ ಯಲು ಆಗ್ರಹಿಸಿ ಪತ್ರ ಚಳವಳಿ ನಡೆಸ ಲಾಗುವುದು ಎಂದು ಎಚ್ಚರಿಸಿದರು.

ಕೇಂದ್ರದ ಹಿಂದಿ ಹೇರಿಕೆ ಸುತ್ತೋಲೆ ಯಿಂದ ದಕ್ಷಿಣ ಭಾರತ ರಾಜ್ಯಗಳ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಇದರಿಂದ ಹಿಂದಿಯೇತರ ಭಾಷಿಕರನ್ನು ದ್ವಿತೀಯ ದರ್ಜೆ ಪ್ರಜೆಗಳಂತೆ ಕಾಣುವ ಮನಸ್ಥಿತಿ ನಿಜಕ್ಕೂ ಅಕ್ಷಮ್ಯ ಎಂದು ಅವರು ಕೇಂದ್ರದ ವಿರುದ್ಧ ಕೆಂಡ ಕಾರಿದರು.

ಈಗಾಗಲೇ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಆಂಗ್ಲ ಭಾಷೆ ವ್ಯಾಮೋಹ ದಿಂದ ಸ್ಥಳೀಯ ಭಾಷೆಯ ಸೊಗಡು ಕಣ್ಮರೆಯಾಗುತ್ತಿದೆ. ಇಂತಹ ಸಂದರ್ಭ ದಲ್ಲಿ ಹಿಂದಿ ಹೇರಿಕೆ ಮಾಡಲು ಕೇಂದ್ರ ಸರಕಾರ ಮುಂದಾಗಿರುವುದರಲ್ಲಿ ಸ್ಥಳೀಯ ಭಾಷೆಗಳ ಕತ್ತು ಹಿಸುಕುವ ಹುನ್ನಾರ ಅಡಗಿದೆ. ಹೀಗಾಗಿ ಕೂಡಲೇ ಹಿಂದಿ ಹೇರಿಕೆ ಸುತ್ತೋಲೆ ಹಿಂಪಡೆಯ ಬೇಕು ಎಂದು ಅವರು ಆಗ್ರಹಿಸಿದರು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s