‘ರೈತರ ವಲಸೆ’ ಸರಕಾರಕ್ಕೆ ಅಗೌರವ: ಕೆ.ಎಸ್.ಪುಟ್ಟಣ್ಣಯ್ಯ

Posted: ಜೂನ್ 26, 2014 in Uncategorized

ಬೆಂಗಳೂರು: ಕೃಷಿ ಕ್ಷೇತ್ರ ಅತೀ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಿರುವ ವಲಯ. ದುಡಿಯುವ ವರ್ಗದ ಜನರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುವುದು ದೇಶ ಹಾಗೂ ಆಡಳಿತ ನಡೆಸುವ ಸರಕಾರಕ್ಕೆ ಅಗೌರವ ತರುವಂತದ್ದು ಎಂದು ಸರ್ವೋದಯ ಕರ್ನಾಟಕ ಪಕ್ಷದ ಸದಸ್ಯ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಬೇಡಿಕೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹತ್ತಾರು ಎಕರೆ ಜಮೀನು ಇದ್ದರೂ ಕೃಷಿಯನ್ನು ಲಾಭದಾಯಕ ಕ್ಷೇತ್ರವನ್ನಾಗಿ ಪರಿವರ್ತಿಸಲು ಸಾಧ್ಯವಾಗದೆ ಇರುವು ದರಿಂದ, ರೈತರು ಉದ್ಯೋಗಗಳನ್ನು ಹುಡುಕಿಕೊಂಡು ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದಾರೆ ಎಂದರು.

ರೈತ ಬೆಳೆಯುವ ಬೆಳೆಗಳಿಗೆ ಬೆಲೆ ಯನ್ನು ನಿಗದಿ ಮಾಡುವ ಎಂಎಸ್‌ಪಿ, ಎಫ್‌ಆರ್‌ಪಿ, ಎಸ್‌ಎಂಪಿ ಬ್ರಿಟಿಷರ ಗುಲಾಮಗಿರಿಯ ಸಂಕೇತವಾಗಿದೆ. ಪ್ರತಿಯೊಬ್ಬರಿಗೂ ಆಹಾರ ಸಿಗಬೇಕು ಎಂಬ ಉದ್ದೇಶದಿಂದ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ, ದೇಶದ 121 ಕೋಟಿ ಜನತೆಗೆ ಅನ್ನ ನೀಡಲು ಶ್ರಮಿಸುವ ಕೃಷಿಕರಿಗಾಗಿ ರೈತ ಭದ್ರತಾ ಕಾಯ್ದೆಯನ್ನು ಯಾಕೆ ಜಾರಿಗೆ ತರಲಾಗಿಲ್ಲ ಎಂದು ಅವರು ಪ್ರಶ್ನಿಸಿದರು. ರಾಜ್ಯದಲ್ಲಿ 130 ಲಕ್ಷ ಟನ್ ಆಹಾರ ಉತ್ಪಾದನೆ ಮಾಡುವ ರೈತರಿಗೆ ಭದ್ರತೆ ಇಲ್ಲದಂತಾಗಿದೆ. ಕೃಷಿ ಪ್ರಧಾನ ರಾಷ್ಟ್ರವಾಗಿರುವ ನಮ್ಮ ದೇಶ, ವಿದೇಶಿ ಬಿತ್ತನೆ ಬೀಜವನ್ನು ಅವಲಂಬಿಸುವಂತಾಗಿದೆ. ಸ್ಥಳೀಯವಾಗಿ ಬೀಜ ಉತ್ಪಾದನೆ ಮಾಡಲು ಕೃಷಿ ಮಂತ್ರಾಲಯ ವಿಫಲವಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದರು. ಕೃಷಿ ಕ್ಷೇತ್ರದಲ್ಲಿ ಅತಿ ಹೆಚ್ಚು ಆತ್ಮಹತ್ಯೆಗಳು ನಡೆಯುತ್ತಿವೆ. ಈ ಬಗ್ಗೆ ಯಾರೂ ಕೂಡ ಹೆಚ್ಚಿನ ಗಮನ ಹರಿಸುತ್ತಿಲ್ಲ. ಕೃಷಿಯನ್ನು ಒಂದು ಉದ್ಯಮವನ್ನಾಗಿ ರೂಪಿಸಿ, ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ಕೃಷಿ ನೀತಿಯನ್ನು ರೂಪಿಸಲು ಸಾಧ್ಯವಾಗು ತ್ತಿಲ್ಲ. 2007-2011ರ ನಡುವೆ ಕೈಗಾರಿಕೋದ್ಯಮಿಗಳಿಗೆ 5 ಲಕ್ಷ ಕೋಟಿ ರೂ.ಗಳನ್ನು ಸಾಲ ನೀಡಲಾಗಿದೆ. ಆದರೆ, ರೈತ ತನ್ನ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುವಂತೆ ಯಾವ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳ ಸಾಲ ನೀಡಿವೆ. ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಪ್ಯಾಕೇಜ್ ಲೋನ್ ನೀಡುವ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಗ್ರಾಮೀಣ ಪ್ರದೇಶದ ಮಹಿಳೆಯ ರನ್ನು ಆರ್ಥಿಕವಾಗಿ ಸಬಲಗೊಳಿಸುವ ರೀತಿಯಲ್ಲಿ ನೀತಿಗಳನ್ನು ರೂಪಿಸ ಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಅವರು
ಪ್ರತಿಪಾದಿಸಿದರು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s