ಕಾಂಗ್ರೆಸ್ ಶಾಸಕ ಕಾಶಪ್ಪನವರ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Posted: ಜುಲೈ 5, 2014 in Uncategorized

ಉಡುಪಿ: ಪೊಲೀಸರು ಹಾಗೂ ಬಾರ್ ನೌಕರರ ಮೇಲೆ ಹಲ್ಲೆ ನಡೆಸಿ ಗೂಂಡಾಯಿಸಂ ಪ್ರದರ್ಶಿಸಿದ ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವಮೋರ್ಛಾ ವತಿಯಿಂದ ಜು.4ರಂದು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಗಡಿಯಾರ ಗೋಪುರದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ನಾಗರಿಕರನ್ನು ರಕ್ಷಣೆ ಮಾಡುವ ಪೊಲೀಸರಿಗೇ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ಶಾಸಕ ಕಾಶಪ್ಪನವರ್ ಅವರನ್ನು ಸರಕಾರವೇ ರಕ್ಷಿಸುತ್ತಿದೆ. ಈ ಹಿಂದೆ ತನಿಕೋಡು ಪ್ರಕರಣದಲ್ಲಿಯೂ ಎಎನ್ಎಫ್ ಸಿಬ್ಬಂದಿಯ ವಿರುದ್ಧವೇ ಕೇಸು ದಾಖಲಿಸಿ ಸರಕಾರ ಜೈಲಿಗೆ ಹಾಕಿತು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಯುವಮೋರ್ಛಾ ಜಿಲ್ಲಾಧ್ಯಕ್ಷ ವಿಲಾಸ್ ನಾಯಕ್, ಕಾರ್ಕಳ ಕ್ಷೇತ್ರ ಸಮಿತಿ ಅಧ್ಯಕ್ಷ ನವೀನ್ ನಾಯ್ಕ, ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಂತೋಷ್, ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ರಂಜಿತ್, ಪಕ್ಷದ ನಾಯಕರಾದ ಯಶಪಾಲ್ ಸುವರ್ಣ, ಮಟ್ಟಾರ್ ರತ್ನಾಕರ ಹೆಗ್ಡೆ ಮೊದಲಾದವರು ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ್ದರು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s