ಆಗಸ್ಟ್ 14ರಿಂದ ಹಾಸ್ಟೆಲ್ ಅವ್ಯವಸ್ಥೆ ಉಡುಪಿ ಡಿಸ ಿ ಕಚೇರಿ ಮುಂದೆ ವಿರುದ್ಧ ಅನಿರ್ಧಿಷ್ಟಾವಧಿ ಸತ್ಯಾ ಗ್ರಹ

Posted: ಆಗಷ್ಟ್ 12, 2014 in Uncategorized

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೊಟ್ಟಂನಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿನ ಶೋಚನೀಯ ಸ್ಥಿತಿಯನ್ನು ಕೂಡಲೇ ಸರಿಪಡಿಸಬೇಕೆಂದು ಒತ್ತಾಯಿಸಿ ಮತ್ತು ವಿದ್ಯಾರ್ಥಿನಿ ನಿಲಯವನ್ನು ತಕ್ಷಣವೇ ಸಾಕಷ್ಟು ಶೌಚಾಲಯಗಳು, ಬಾತ್ ರೂಮುಗಳು ಇತ್ಯಾದಿ ಎಲ್ಲಾ ಸೌಲಭ್ಯಗಳಿರುವ ಸೂಕ್ತ ಕಟ್ಟಡಕ್ಕೆ ಸ್ಥಾಳಾಂತರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷ ಶ್ರೀರಾಮ ದಿವಾಣ ಆಗಸ್ಟ್ 14ರಂದು ಬೆಳಗ್ಗೆ ಗಂಟೆ 10ರಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅನಿರ್ಧಿಷ್ಠಾವಧಿ ಸತ್ಯಾಗ್ರಹ ಆರಂಭಿಸಲಿದ್ದಾರೆ.

ವಿದ್ಯಾರ್ಥಿನಿ ನಿಲಯದಲ್ಲಿನ ಅವ್ಯವಸ್ಥೆಗಳ ಬಗ್ಗೆ ಜನಪರ ವೇದಿಕೆಯ ಒಂಭತ್ತು ಮಂದಿಯ ನಿಯೋಗವು ಆಗಸ್ಟ್ 12ರಂದು ಮಧ್ಯಾಹ್ನ ಅಪರ ಜಿಲ್ಲಾಧಿಕಾರಿಗಳು, ಜಿ.ಪಂ.ಅಧ್ಯಕ್ಷರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿಗಳನ್ನು ಸಲ್ಲಿಸಿತು.

ಮನವಿಯ ಯಥಾ ಪ್ರತಿಗಳನ್ನು ಮುಖ್ಯಮಂತ್ರಿಗಳು, ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೂ ಸಲ್ಲಿಸಿದೆ.

ಮನವಿ ಸಲ್ಲಿಸಿದ ಸಂದರ್ಭದಲ್ಲಿ, ನಾಳೆಯೇ (13.08.14) ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿ ಗತಿ ಬಗ್ಗೆ ವರದಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಕುಮರ್ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಶೇಷಪ್ಪ ಅವರಿಗೆ ಸೂಚಿಸಿದ್ದಾರೆ. ನಾಳೆಯೇ (13.08.14) ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡುವುದಾಗಿ ಜಿ.ಪಂ.ಅಧ್ಯಕ್ಷರು ವೇದಿಕೆಯ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷ ಶ್ರೀರಾಮ ದಿವಾಣ, ಪದಾಧಿಕಾರಿಗಳಾದ ರಸೂಲ್ ಕಟಪಾಡಿ, ಹೇಮಂತ್ ಕುಂದರ್, ಮೊಹಮ್ಮದ್ ಹಂದಟ್ಟು, ಪ್ರಕಾಶ್ ಪೂಜಾರಿ, ದೇಜಪ್ಪ ಹಿರಿಯಡ್ಕ, ಸುರೇಶ್ ಹಿರಿಯಡ್ಕ, ಆರ್.ಡಿ.ಪಾಂಬೂರು ಹಾಗೂ ಸಂಜೀವ ಪೂಜಾರಿ ಮನವಿ ಸಲ್ಲಿಸಿದ ನಿಯೋಗದಲ್ಲಿ ಇದ್ದರು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s