ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಡಿ.ಜೆ.ಸೌಂಡ್ ಗೆ ಅವಕಾಶವಿಲ್ಲ: ಪೊಲೀಸ್ ಇಲಾಖೆ

Posted: ಆಗಷ್ಟ್ 24, 2014 in Uncategorized

ಉಡುಪಿ: ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಸಾರ್ವಜನಿಕ ಗಣೇಶೋತ್ಸವಗಳನ್ನು ಆಚರಿಸುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಡಿ.ಜೆ. ಸೌಂಡ್ ಬಳಕೆ ಮಾಡಲು ಅವಕಾಶವಿಲ್ಲ ಮತ್ತು ಕಾರ್ಯಕ್ರಮ ನಡೆಯುವ ಪೆಂಡಾಲುಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಟಿ.ವಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.

ಗಣೇಶೋತ್ಸವ ನಡೆಯುವ ಸ್ಥಳಗಳಲ್ಲಿ ದಿನದ 24 ಗಂಟೆಗಳ ಕಾಲವೂ ಕಾವಲುಗಾರರನ್ನು ನೇಮಿಸಬೇಕು, ಅಶ್ಲೀಲ ಚಿತ್ರಗೀತೆಗಳು, ಕೋಮುಭಾವನೆ ಕೆರಳಿಸುವಂಥ ಹಾಡುಗಳು ಅಥವಾ ಸಂಭಾಷಣೆಗಳನ್ನು ಬಿತ್ತರಿಸಕೂಡದು ಎಂದು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಗಣೇಶ ವಿಗ್ರಹಗಳ ಮೆರವಣಿಗೆಯ ಸಮಯದಲ್ಲಿ ಮದ್ಯಪಾನ ಮಾಡಿರುವವರು ಸೇರಿಕೊಳ್ಳದಂತೆ ಎಚ್ಚರಿಕೆ ವಹಿಸಿಕೊಳ್ಳಬೇಕು, ಅನ್ಯ ಮತೀಯರಿಗೆ ನೋವನ್ನುಂಟುಮಾಡುವಂಥ
ಉದ್ರೇಕಕಾರಿ/ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಬಾರದು, ಸಿಡಿಮದ್ದು/ಪಟಾಕಿ ಸಿಡಿಸುವಾಗ ಅನ್ಯ ಮತೀಯರಿಗೆ ಹಾಗೂ ಸಆರ್ವಜನಿಕರಿಗೆ ತೊಂದರೆಯುಂಟಾಗದಂತೆ ಜಾಗ್ರತೆ ವಹಿಸಬೇಕು ಮತ್ತು ಪೊಲೀಸರು ತಿಳಿಸಿದ ಮಾರ್ಗದಲ್ಲೇ ಮೆರವಣಿಗೆಯನ್ನು ಕೊಂಡೊಯ್ಯಬೇಕು ಎಂದು ಪೊಲೀಸ್ ಇಲಾಖಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s