ಉಡುಪಿ: ಕಾನೂನು ಕಾಯಿದೆಗಳನ್ನು ಜ್ಯಾರಿಗೊಳಿಸಲು ಒತ್ತಾಯಿಸಿ ಹೋರಾಟ ನಡೆಸಿದರೆ ಮಾತ್ರ ಸಾಲದು. ನಮ್ಮ ದೇಶದಲ್ಲಿ ಬಹಳಷ್ಟು ಕಾನೂನು ಕಾಯಿದೆಗಳಿದ್ದು,
ಜ್ಯಾರಿಯಲ್ಲಿರುವ ಕಾನೂನು ಕಾಯಿದೆಗಳನ್ನು ಅರಿತುಕೊಂಡು ಅವುಗಳನ್ನು
ಸದುಪಯೋಗಪಡಿಸಿಕೊಳ್ಳುವ ಪ್ರಯತ್ನ ನಡೆಸುವಂತಾಗಬೇಕು. ಈ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯಿದೆಯನ್ನು ಸಮರ್ಥವಾಗಿ ಸದ್ಬಳಕೆ ಮಾಡುವುದರ ಮೂಲಕ ದೇಶವನ್ನು
ಬಾಧಿಸುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಜವಾಬ್ದಾರಿಯನ್ನು ನಿಭಾಯಿಸುವ ಮೂಲಕ ಪ್ರತಿಯೊಬ್ಬ ನಾಗರಿಕನೂ ನಿಜವಾದ ದೇಶಪ್ರೇಮವನ್ನು ಮೆರೆಯಬೇಕು ಎಂದು ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಶ್ರೀರಾಮ ದಿವಾಣ ಹೇಳಿದರು.

ಕಿನ್ನಿಗೋಳಿ ಸಮೀಪದ ಪೊಂಪೈ ಪದವಿ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಆಗಸ್ಟ್ 27ರಂದು ಮಾಹಿತಿ ಹಕ್ಕು ಕಾಯಿದೆ ಬಗ್ಗೆ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಕಾಲೇಜು ಪ್ರಾಂಶುಪಾಲರಾದ ಡಾ.ಜೆ.ಸಿ.ಮಿರಾಂದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಕುಮಾರಿ ಕ್ರಿಶಲ್, ಅಕ್ಷತಾ ಶೆಟ್ಟಿ, ಪ್ರದೀಪ್ ಹಾಗೂ ತಿಲಕ್ ಗೌಡ ಉಪಸ್ಥಿತರಿದ್ದರು. ವಿದ್ಯಾರ್ಥಿ ಉಜ್ವಲ್ ಸ್ವಾಗತಿಸಿ, ವಂದರ್ನಾಪಣೆ ಸಲ್ಲಿಸಿದರು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s