ಬಹುಕೋಟಿ ರಾಸಾಯನಿಕ ಹಗರಣದ ತನಿಖೆಗೆ ಮಾರ್ಗದರ್ಶನ ಮಾಡುತ್ತಿದ್ದ ಎಡಿಜಿಪಿ ದಿಢೀರ್ ಎತ್ತಂಗಡಿ

Posted: September 13, 2014 in Uncategorized

ಉಡುಪಿ: ಬಹುಕೋಟಿ ರಾಸಾಯನಿಕ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದ ಕನರ್ಾಟಕ ಲೋಕಾಯುಕ್ತದ ಎಡಿಜಿಪಿ ಎಚ್.ಎನ್.ಸತ್ಯನಾರಾಯಣ ರಾವ್ ಅವರನ್ನು ರಾಜ್ಯದ ಕಾಂಗ್ರೆಸ್ ಸರಕಾರ ದಿಢೀರನೇ ಸಂವಹನ ಸರಕು ಸಾಗಣೆ ಮತ್ತು ಆಧುನೀಕರಣ ವಿಭಾಗಕ್ಕೆ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ. ಸತ್ಯನಾರಾಣ ರಾವ್ ಅವರ ಸ್ಥಾನಕ್ಕೆ ಪ್ರೇಮ್ ಶಂಕರ ಮೀನಾ ಅವರನ್ನು ನೇಮಕ ಮಾಡಿದೆ.

ಎಡಿಜಿಪಿ ಸತ್ಯನಾರಾಯಣ ರಾವ್ ಅವರು, ಬಹುಕೋಟಿ ರಾಸಾಯನಿಕ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮತ್ತು ಉಡುಪಿಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದ ತನಿಖಾ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ಮಾಡುತ್ತಿದ್ದರು. ರಾಸಾಯನಿಕ ಹಗರಣದ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸುವುದಿತ್ತು. ದೋಷಾರೋಪಣಾ ಪಟ್ಟಿ ಸಲ್ಲಿಸುವ ಮೊದಲೇ ತನಿಖೆಗೆ ಮಾರ್ಗದರ್ಶನ ಮಾಡುತ್ತಿದ್ದ ಎಡಿಜಿಪಿ ರಾವ್ ಅವರನ್ನು ವರ್ಗಾವಣೆ ಮಾಡಿರುವುದು ಕೆಲವೊಂದು ಶಂಕೆಗಳಿಗೆ ಕಾರಣವಾಗಿದೆ.

ಅನೇಕ ಮಂದಿ ಹಿರಿಯ ಐಎಎಸ್ ಅಧಿಕಾರಿಗಳು, ಕಾಂಗ್ರೆಸ್ ಮತ್ತು ಬಿಜೆಪಿಯ ಶಾಸಕರು, ಹಾಲಿ ಮತ್ತು ಮಾಜಿ ಸಚಿವರುಗಳ ಸಹಿತ ಪ್ರಭಾವೀ ವ್ಯಕ್ತಿಗಳು ಬಹುಕೋಟಿ ರಾಸಾಯನಿಕ ಹಗರಣದಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶಾಮೀಲಾಗಿದ್ದು, ಇವರುಗಳ ಒತ್ತಡಕ್ಕೆ ಒಳಗಾಗಿ ರಾಜ್ಯದ ಕಾಂಗ್ರೆಸ್ ಸರಕಾರ ಎಡಿಜಿಪಿ ಸತ್ಯ ನಾರಾಯಣ ರಾವ್ ಅವರನ್ನು ವರ್ಗಾವಣೆ ಮಾಡಿರುವ ಸಾಧ್ಯತೆ ಇರುವುದರಿಂದ, ವರ್ಗಾವಣೆಯ ನಿಜವಾದ ಕಾರಣವನ್ನು ಸರಕಾರ ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು ಎಂದು ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷ ಶ್ರೀರಾಮ ದಿವಾಣ ಆಗ್ರಹಿಸಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s