ಅ.15: ಡಾ.ಶರತ್ ಅಮಾನತು ವಿರುದ್ಧದ ಮುಂದಿನ ಹೋರಾಟಕ್ಕೆ ಪೂರ್ವಭಾವಿ ಸಭೆ

Posted: ಅಕ್ಟೋಬರ್ 12, 2014 in Uncategorized

http://www.udupibits.in news

ಉಡುಪಿ: ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ಪ್ರಾಮಾಣಿಕ ವ್ಯದ್ಯಾಧಿಕಾರಿಗಳಾಗಿದ್ದು, ಒಂದು ವರ್ಷ ಒಂದು ತಿಂಗಳ ಹಿಂದೆ ಅಸಂವಿಧಾನಿಕವಾಗಿ ಅಮಾನತುಗೊಂಡಿರುವ ಡಾ.ಶರತ್ ಕುಮಾರ್ ರಾವ್ ಅವರಿಗಾದ ಮತ್ತು ಆಗುತ್ತಿರುವ ಅನ್ಯಾಯದ ವಿರುದ್ಧ ಆರಂಭಿಸಿದ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ, ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲು ಅಕ್ಟೋಬರ್ 15ರಂದು ಸಂಜೆ 5 ಗಂಟೆಗೆ ಉಡುಪಿ ನಗರದ ಕಿದಿಯೂರು ಹೋಟೇಲಿನ ಮಹಾಜನ್ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ ಎಂದು ಖ್ಯಾತ ಮನೋವೈದ್ಯರಾದ ಡಾ.ಪಿ.ವಿ.ಭಂಡಾರಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 4ರಂದು ಡಾ.ಪಿ.ಭಂಡಾರಿಯವರು, ತಮ್ಮ ನೂರಾರು ಮಂದಿ ಬೆಂಬಲಿಗರೊಂದಿಗೆ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆ ಮುಂದೆ ಸಾಂಕೇತಿಕ ಪ್ರತಿಭಟನಾ ಸಭೆ ನಡೆಸಿ, ಬಳಿಕ ಜಿಲ್ಲಾಸ್ಪತ್ರೆಯಿಂದ ಮಣಿಪಾಲದ ಎಂಡ್ ಪಾಯಿಂಟ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿವರೆಗೆ ಬಾಯಿಗೆ ಬಿಳಿ ಮತ್ತು ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನ ಮೆರವಣಿಗೆ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಇಲಾಖಾ ಪ್ರಧಾನ ಕಾರ್ಯದರ್ಶಿ ಶಿವಸೈಲಂ, ಆರೋಗ್ಯ ಸಿಚಿವ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ, ಶಾಸಕ ಪ್ರಮೋದ್ ಮಧ್ವರಾಜ್ ಸಹಿತ ಹಲವರಿಗೆ ಮನವಿ ಸಲ್ಲಿಸಿದ್ದರು.

ಪ್ರತಿಭಟನೆಯ ಸಮಯದಲ್ಲಿ ಡಾ.ಭಮಡಾರಿಯವರು, ಅಕ್ಟೋಬರ್ 19ರ ಒಳಗೆ ಡಾ.ಶರತ್ ಕುಮಾರ್ ರಾವ್ ಅವರ ಅಮಾನತು ಆದೇಶವನ್ನು ಹಿಂತೆಗೆದುಕೊಳ್ಳದೇ ಇದ್ದಲ್ಲಿ, ಅಜ್ಜರಕಾಡಿನಲ್ಲಿ ಸತ್ಯಾಗ್ರಹ ಕ್ಲಿನಿಕ್ ಆರಂಭಿಸುವ ಮೂಲಕ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ವಿನೂತನ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮುನ್ನೆಚ್ಚರಿಕೆ ನೀಡಿದ್ದರು.

ಡಾ.ಭಂಡಾರಿ ಹಾಗೂ ನೂರಾರು ಗಣ್ಯರು ಮುಂದಿಟ್ಟ ಬೇಡಿಕೆಗಳನ್ನು ರಾಜ್ಯ ಸರಕಾರ ಇದುವರೆಗೆ ಈಡೇರಿಸಿಲ್ಲವಾದುದರಿಂದ, ಹೋರಾಟದ ಮುಂದಿನ ರೂಪುರೇಷೆ ನಿರ್ಧರಿಸಲು ಸಭೆ ಕರೆಯಲಾಗಿದೆ. ಈ ಸಭೆಗೆ ವಿವಿಧ ಸಂಘ ಸಂಸ್ಥೆಗಳನ್ನು, ಸಾರ್ವಜನಿಕರನ್ನು ಆಮಂತ್ರಿಸಲಾಗಿದೆ. ಭ್ರಷ್ಟಾಚಾರ ವಿರೋಧಿಗಳು, ಡಾ.ಶರತ್ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಹೋರಾಟವನ್ನು ಬೆಂಬಲಿಸಬೇಕು ಎಂದು ಡಾ.ಪಿ.ವಿ.ಭಂಡಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s