ಶಾಲಾ ಸಿಬ್ಬಂದಿಗಳ ನೇಮಕಕ್ಕೆ ಪೊಲೀಸ್ ಪರಿಶೀಲನೆ ಅಗತ್ಯ: ಎಸ್ಪಿ ರಾಜೇಂದ್ರ ಪ್ರಸಾದ್

Posted: ಅಕ್ಟೋಬರ್ 28, 2014 in Uncategorized

http://www.udupibits.in news

ಉಡುಪಿ: ಜಿಲ್ಲೆಯ ಎಲ್ಲಾ ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ತಮ್ಮ ಶಾಲೆಗಳಿಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಮುನ್ನ ಸದರಿ ಸಿಬ್ಬಂದಿಗಳ ಕುರಿತು ಪೊಲೀಸ್ ಇಲಾಖೆಯ ಪರಿಶೀಲನೆಯ ಪತ್ರ ಪಡೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮಹಾಳ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಪೋಕ್ಸೋ ಕಾಯಿದೆ ಅನುಷ್ಠಾನ ಕುರಿತ ಸಭೆಯಲ್ಲಿ ಮಾತನಾಡಿದರು.

ಇತ್ತೀಚೆಗೆ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಶಾಲೆಯ ಕೆಳ ದರ್ಜೆಯ ಸಿಬ್ಬಂದಿಗಳು ಕಾರಣವಾಗುತ್ತಿದ್ದು, ಪ್ರತಿಯೊಂದು ವಿದ್ಯಾ ಸಂಸ್ಥೆಯು ಸಹ ತಮ್ಮಲ್ಲಿ ನೇಮಕ ಮಾಡಿಕೊಳ್ಳುವ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಗುಣ, ನಡತೆಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಪರಿಶೀಲನ ಪ್ರಮಾಣ ಪತ್ರವನ್ನು ಪಡೆಯುವಂತೆ ತಿಳಿಸಿದರು.

ಮಕ್ಕಳಿಗೆ ತಮ್ಮ ಮೇಲೆ ನಡೆಯುವ ದೌರ್ಜನ್ಯದ ಅರಿವು ಇರುವುದಿಲ್ಲ. ಅಲ್ಲದೇ ಈ ರೀತಿಯ ದೌರ್ಜನ್ಯಗಳು ನಡೆದಾಗ ಪೋಷಕರೂ ಸಹ ಹೇಗೆ ಪ್ರತಿಕ್ರಿಯಿಸಬೇಕೆಂಬ ಅರಿವು ಇರುವುದಿಲ್ಲ. ಆದರೆ ಪೋಕ್ಸೋ ಕಾಯಿದೆಯ ಸೆಕ್ಷನ್ 21 ರ ಪ್ರಕಾರ ಮಕ್ಕಳ ದೌರ್ಜನ್ಯದ ಬಗ್ಗೆ ಮಾಹಿತಿ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಈ ಕುರಿತು ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುವ ಪೊಲೀಸ್ ಅಧಿಕಾರಿ, ವೈದ್ಯಾಧಿಕಾರಿ, ಪೋಷಕರು, ಶಿಕ್ಷಣ ಸಂಸ್ಥೆಗಳು ಎಲ್ಲರನ್ನೂ ಸಹ ಶಿಕ್ಷಿಸಬಹುದಾಗಿದೆ ಎಂದು ಅವರು ಹೇಳಿದರು.

ಶಾಲಾ ಆವರಣದಲ್ಲಿ ದೂರು ಪೆಟ್ಟಿಗೆಗಳನ್ನು ಇಡುವುದು, ಶಾಲೆಯಲ್ಲಿ ನಡೆಯುವ ರ್ಯಾಗಿಂಗ್ ಪ್ರಕರಣಗಳ ಕುರಿತು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವದರ ಮೂಲಕ ಈ ರೀತಿಯ ದೌರ್ಜನ್ಯ ತಡೆಯಬಹುದಾಗಿದೆ. ಶಾಲಾ ಆವರಣದಲ್ಲಿ ಮಕ್ಕಳು ಮೊಬೈಲ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಹಾಗೂ ಶಾಲಾ ಪ್ರಾರಂಭ ಮತ್ತು ಶಾಲೆ ಮುಕ್ತಾಯದ ನಂತರ ಶಾಲೆಯ ಬಳಿ ಪೊಲೀಸ್ ಗಸ್ತು ಮಾಡಲಾಗುವುದು ಎಂದು ಎಸ್ಪಿ ರಾಜೇಂದ್ರ ಪ್ರಸಾದ್ ಸ್ಪಷ್ಟಪಡಿಸಿದರು.

ಜಿಲ್ಲೆಯನ್ನು ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದಿಂದ ಸಂಪೂರ್ಣ ಮುಕ್ತವಾಗಿಸಲು ಕ್ರಿಯ ಯೋಜನೆಯನ್ನು ರೂಪಿಸಲಾಗಿದೆ. ಅದರಂತೆ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಅಂಗನವಾಡಿ, ಆಶಾ ಹಾಗೂ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ಈ ಕುರಿತು ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣ ಶೆಟ್ಟಿ ಹೇಳಿದರು.

ರಾಜ್ಯದ ಮಹಿಳಾ ಹಕ್ಕುಗಳ ಆಯೋಗದ ಸದಸ್ಯೆ ವನಿತಾ ತೋರ್ವಿರವರು ಮಾತನಾಡಿ ಜಿಲ್ಲೆಯಲ್ಲಿ ಬಿಕ್ಷಾಟನೆಗೆ ಬಾಲ ಕಾರ್ಮಿಕರನ್ನು ಬಳಸಿಕೊಂಡು ದೌರ್ಜನ್ಯ ಎಸಗುತ್ತಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ಹಾಗೂ ಪೋಕ್ಸೋ ಕಾಯದೆಯ ಕುರಿತು ರಾಜ್ಯದಾದ್ಯಂತ ಅರಿವು ಮೂಡಿಸಲು ಕಾರ್ಯಕ್ರಮ ಏರ್ಪಡಿಸಲಾಗುವುದು ಮತ್ತು ರಾಜ್ಯಾದ್ಯಂತ ಜಾಹೀರಾತುಗಳ ಮೂಲಕ ಜನರಿಗೆ ಹೆಚ್ಚಿನ ಅರಿವು ಮೂಡಿಸಲಾಗುವುದು. ಜಿಲ್ಲೆಯಲ್ಲಿ ನವೆಂಬರ್ ಮಾಹೆಯಲ್ಲಿ ಪ್ರತ್ಯೇಕ ಕಾರ್ಯಾಗಾರ ನಡೆಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ವಿದ್ಯಾಂಗ ಇಲಾಖೆಯ ಉಪ ನಿರ್ದೇಶಕ ದಿವಾಕರ ಶೆಟ್ಟಿ ಮಾತನಾಡಿ, ಜಿಲ್ಲೆಯ ಎಲ್ಲಾ ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಅಕ್ಟೋಬರ್ 31 ರ ಒಳಗೆ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಿಕೊಳ್ಳುವಂತೆ ಸೂಚಿಸಿದ್ದು, ತಪ್ಪಿದ್ದಲ್ಲಿ ಅಂತಹ ಶಾಲೆಗಳಿಗೆ ಸರಕಾರದಿಂದ ನೀಡುವ ವೇತನ, ಅನುದಾನ ಮತ್ತಿತರ ಸೌಲಭ್ಯಗಳನ್ನು ತಡೆಹಿಡಿಯುವ ಕುರಿತು ಸೂಚಿಸಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಸಲಹಾ ಪೆಟ್ಟಿಗೆ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಪ್ರಭಾರ) ವಿಜಯ ಕುಮಾರ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಗ್ರೇಸಿ ಎಲ್.ಗೊನ್ಸಾಲ್ವಿಸ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಬೇಕಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಶೀಂಧಾ ಸೇರಿದಂತೆ ವಿವಿಧ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ನಮ್ಮ ಭೂಮಿ, ಸ್ಪೂರ್ತಿಧಾಮ ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಶಾಲೆಗಳ ಪ್ರತಿನಿಧಿಗಳು ಹಾಜರಿದ್ದರು.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s